alex Certify BIG NEWS: ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು

ಚಿಕ್ಕಬಳ್ಳಾಪುರ; ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲಾಗಿದೆ. ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ.

ಜಗ್ಗಿ ವಾಸುದೇವ್ ಅವರು ಜೀವಂತ ಹಾವು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಉರಗ ತಜ್ಞ ಪೃಥ್ವಿರಾಜ್ ದೂರು ನೀಡಿದ್ದಾರೆ.

ಕೆಲದಿನಗಳ ಹಿಂದೆ ನಡೆದ ನಾಗಮಂಟಪ ಪ್ರತಿಷ್ಠಾನ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಇದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಗ್ಗಿ ವಾಸುದೇವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...