ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಸಿಡಿದೆದ್ದಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗಾವಿ ಸುವರ್ಣ ವಿಧಾನಸೌಧ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಜಿಲ್ಲೆಯಲ್ಲಿ ಮತ್ತೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ನಿಷೇಧಾಜ್ಞೆ ನಡುವೆಯೂ ನಾಲ್ಕು ಮಾರ್ಗಗಳಲ್ಲಿ ಆಗಮಿಸಿರುವ ಕರವೇ ಕಾರ್ಯಕರ್ತರು, ಎಂಇಎಸ್, ಶಿವಸೇನೆ ವಿರುದ್ಧ ಧಿಕ್ಕಾರ ಕೂಗುತ್ತ ಸುವರ್ಣಸೌಧ ಮುತ್ತಿಗೆಗೆ ಯತ್ನಿಸಿದ್ದಾರೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಾಹನ ತಡೆದ ಪ್ರತಿಭಟನಾಕಾರರು ಹೊರಟ್ಟಿ ಅವರಿಗೆ ಮುತ್ತಿಗೆ ಹಾಕಿ ಎಂಇಎಸ್ ನಿಷೇಧ ಮಾಡುವಂತೆ ಆಗ್ರಹಿಸಿದ್ದಾರೆ. ಪ್ರತಿಭಟನಾ ನಿರತರ ಮನವಿಗೆ ಸ್ಪಂದಿಸಿದ ಹಿನ್ನೆಲೆಯಲ್ಲಿ ಸಭಾಪತಿ ಕಾರು ತೆರಳಲು ಅವಕಾಶ ಮಾಡಿಕೊಟ್ಟಿದ್ದಾರೆ.
ಹ್ಯಾಂಡ್ ವಾಶ್ ಸೇವಿಸಿ ಆತ್ಮಹತ್ಯೆಗೆತ್ನಿಸಿದ ವಿಜ್ಞಾನಿ
ಇದೇ ವೇಳೆ ಸಚಿವ ಹಾಲಪ್ಪ ಆಚಾರ್ ಅವರ ಕಾರನ್ನು ತಡೆದು ನಿಲ್ಲಿಸಿದ ಹೋರಾಟಗಾರರು, ಕನ್ನಡಿಗರ ಪರ ಕೆಲಸ ಮಾಡುವಂತೆ ಮನವಿ ಮಾಡಿದ್ದಾರೆ. ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರ ಆಕ್ರೋಶ ಮುಗಿಲುಮುಟ್ಟಿದ್ದು, ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿ ಕಿಡಿಕಾರಿದ್ದಾರೆ.