alex Certify BIG NEWS: ಸಮಾಜ ಒಡೆಯುವಲ್ಲಿ ನಿಮಗಿಂತ ನಿಷ್ಠಾತರು ಬೇರೆ ಇಲ್ಲ; ‘ಜಾತಿ ವಿಭಜಕ ಸಿದ್ದರಾಮಯ್ಯ’ ಎಂದು ಕಿಡಿಕಾರಿದ BJP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಮಾಜ ಒಡೆಯುವಲ್ಲಿ ನಿಮಗಿಂತ ನಿಷ್ಠಾತರು ಬೇರೆ ಇಲ್ಲ; ‘ಜಾತಿ ವಿಭಜಕ ಸಿದ್ದರಾಮಯ್ಯ’ ಎಂದು ಕಿಡಿಕಾರಿದ BJP

ಬೆಂಗಳೂರು: ಉಪಚುನಾವಣೆ ಗೆಲುವಿಗಾಗಿ ರಾಜಕೀಯ ಪಕ್ಷಗಳು ಜಾತಿವಾರು ಲೆಕ್ಕಾಚಾರ ಮುಂದಿಟ್ಟು ಮತ ಭೇಟೆಗೆ ಮುಂದಾಗಿದ್ದು, ಇದೀಗ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ರಾಜ್ಯ ಬಿಜೆಪಿ, ಸಮಾಜವನ್ನು ಜಾತಿ ಆಧಾರದ ಮೇಲೆ ಒಡೆದು ರಾಜಕೀಯ ಲಾಭ ಪಡೆಯುವುದರಲ್ಲಿ ಸಿದ್ದರಾಮಯ್ಯಗಿಂತ ನಿಷ್ಠಾತರು ಬೇರೆ ಇಲ್ಲ ಎಂದು ವಾಗ್ದಾಳಿ ನಡೆಸಿದೆ.

ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಟಾಂಗ್ ನೀಡಿರುವ ಬಿಜೆಪಿ, ವಿದ್ಯಾರ್ಥಿಗಳ ಪ್ರವಾಸ ಕಾರ್ಯಕ್ರಮದಲ್ಲೂ ಜಾತಿ ಹುಡುಕಿದವರು ಸಿದ್ದರಾಮಯ್ಯ, ವೀರಶೈವ, ಲಿಂಗಾಯಿತ ಎಂದು ವಿಭಜನೆಯ ಬೆಂಕಿ ಹಚ್ಚಿದ ನೀವು ಯಾವ ಆಧಾರದಲ್ಲಿ ಜಾತಿ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳುತ್ತಿದ್ದೀರಿ? ಜಾತಿವಿಭಜಕ ಸಿದ್ದರಾಮಯ್ಯ ಎಂದು ಪ್ರಶ್ನಿಸಿದೆ.

ಟಿ ಟ್ವೆಂಟಿ ವಿಶ್ವಕಪ್ 2021: ಅಫ್ಘಾನಿಸ್ತಾನ್ ತಂಡಕ್ಕೆ ಸ್ಕಾಟ್ಲೆಂಡ್ ಸವಾಲು

ರಾಜ್ಯದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ. ಅದೇ ಸಿದ್ದರಾಮಯ್ಯ ಇಂದು ಮತಗಳಿಸಲು ಸುಳ್ಳಿನ ಸರಮಾಲೆ ಸೃಷ್ಟಿಸುತ್ತಿದ್ದಾರೆ. ನಿಜವಾಗಿ ಸಿದ್ದರಾಮಯ್ಯ ಜಾತ್ಯಾತೀತರಾಗಿದ್ದರೆ ಉಪಚುನಾವಣೆ ಸಂದರ್ಭದಲ್ಲೂ ಜಾತಿವಾರು ಸಭೆ ನಡೆಸುವ ಅಗತ್ಯವಿತ್ತೇ? ಜಾತಿ, ಉಪಜಾತಿ ಒಡೆಯುವ ಕೆಲಸದಲ್ಲಿ ತೊಡಗಿರುವುದೇ ಸಿದ್ದರಾಮಯ್ಯ ಎಂದು ಗುಡುಗಿದೆ.

ತಿಲಕ ಕಂಡರೆ ಭಯ ಎನ್ನುವ ಮೂಲಕ ಸಿದ್ದರಾಮಯ್ಯ ಹಿಂದೂ ಧರ್ಮ ಅವಹೇಳನ ಮಾಡಿದರು. ಆಗ ಅವರಿಗೆ ಅಲ್ಪಸಂಖ್ಯಾತರ ಓಲೈಕೆ ಮುಖ್ಯವಾಗಿತ್ತು. ಅದಕ್ಕಾಗಿ ಟಿಪ್ಪು ಜಯಂತಿ ಮಾಡಿದರು. ಇದು ಸಮಾಜ ವಿಭಜನೆಯಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...