alex Certify BIG NEWS: ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರ ದುರ್ಮರಣ ಪ್ರಕರಣ; ಟ್ಯಾಂಕರ್ ಚಾಲಕ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರ ದುರ್ಮರಣ ಪ್ರಕರಣ; ಟ್ಯಾಂಕರ್ ಚಾಲಕ ಪೊಲೀಸ್ ವಶಕ್ಕೆ

ಹಾಸನ: ಹಾಸನ ಬಳಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯಾಂಕರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಾಲಿನ ಟ್ಯಾಂಕರ್ ಚಾಲಕ ನವೀನ್ ನನ್ನು ಬಾಣಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಗಾಂಧಿನಗರ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ 9 ಜನರು ಸಾವನ್ನಪ್ಪಿದ್ದರು.

ಸರ್ಕಾರಿ ಬಸ್, ಟೆಂಪೋ ಟ್ರಾವಲರ್, ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿತ್ತು. ರಾಂಗ್ ರೂಟ್ ನಲ್ಲಿ ಬಂದ ಹಾಲಿನ ಟ್ಯಾಂಕರ್ ಚಾಲಕನದ್ದೇ ತಪ್ಪು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರಕರಣ ಸಂಬಂಧ ಇದೀಗ ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...