alex Certify BIG NEWS: ಸರಣಿ ಹತ್ಯೆಗಳ ಹಿಂದೆ ಸಂಘ ಪರಿವಾರದ ಕೈವಾಡ…..? RSS ಆಂತರಿಕ ಬಿಕ್ಕಟ್ಟೆ ಕೊಲೆಗೆ ಕಾರಣ; ತನಿಖೆಯಿಂದ ಸತ್ಯ ಬಯಲಾಗಲಿ ಎಂದ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರಣಿ ಹತ್ಯೆಗಳ ಹಿಂದೆ ಸಂಘ ಪರಿವಾರದ ಕೈವಾಡ…..? RSS ಆಂತರಿಕ ಬಿಕ್ಕಟ್ಟೆ ಕೊಲೆಗೆ ಕಾರಣ; ತನಿಖೆಯಿಂದ ಸತ್ಯ ಬಯಲಾಗಲಿ ಎಂದ ಸಿದ್ದರಾಮಯ್ಯ

ಬೆಂಗಳೂರು: ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹತ್ಯೆ ಪ್ರಕರಣಗಳ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಬೇಕು. ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದು ಆಗ್ರಹಿಸಿದ್ದಾರೆ.

ನಳೀನ್ ಕುಮಾರ್ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾಗುತ್ತದೆ ಎಂದು ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ? ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಸಿಎಂ, ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ಪರಿಹಾರ ನಿಟ್ಟಿನಲ್ಲಿಯೂ ತಾರತಮ್ಯ ಮಾಡಿರುವ ಸರ್ಕಾರದ ನಡೆಯನ್ನು ಖಂಡಿಸಿರುವ ಸಿದ್ದರಾಮಯ್ಯ, ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು, ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿಗಳ ಕರ್ತವ್ಯ ಎಂದಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್.ಎಸ್.ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ. ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...