ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತ ಚಲಾಯಿಸಿದ್ದಾರೆ.
ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆ ಆವರಣದಲ್ಲಿ ಮತಗಟ್ಟೆ ಸಂಖ್ಯೆ 26ರಲ್ಲಿ ಸರತಿ ಸಾಲಿನಲ್ಲಿ ನಿಂತು ಜಾವಗಲ್ ಶ್ರೀನಾಥ್ ಮತದಾನ ಮಾಡಿದರು.
ಜಾವಗಲ್ ಶ್ರೀನಾಥ್ ಮೈಸೂರು ಜಿಲ್ಲಾ ಚುನಾವಣಾ ರಾಯಭಾರಿ ಕೂಡ ಆಗಿದ್ದಾರೆ.