ನಿನ್ನೆ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಿತು. ಈ ವೇಳೆ ಸಿಎಂ ಬೊಮ್ಮಾಯಿ ಆಕ್ರೋಶಭರಿತವಾಗಿ ಮಾತನಾಡಿದರು. ಅವರು ಮಾಡಿದ ಭಾಷಣಕ್ಕೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಆಕ್ರೋಶಭರಿತವಾಗಿ ಮಾತನಾಡಿದ್ದ ಸಿಎಂ ಗೆ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಹೌದು, ಜನಸ್ಪಂದನ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ, ಅವರ ಧಮ್ ಏನು ಎಂಬುದನ್ನು ಜನ ಅಲ್ಲೇ ತೋರಿಸಿದ್ದಾರೆ. ಅವರ ಭಾಷಣದ ವೇಳೆ ಎಷ್ಟು ಕುರ್ಚಿ ಖಾಲಿಯಾಗಿದ್ದವು ಎಂಬುದನ್ನು ಇಡೀ ರಾಜ್ಯದ ಜನತೆ ನೋಡಿದೆ ಎಂದು ಹೇಳಿದ್ದಾರೆ. 2023 ಕ್ಕೆ ಜನ ತೋರಿಸುತ್ತಾರೆ ಎಂದು ಹೇಳಿದ್ದಾರೆ.
ನನ್ನ ಅವಧಿಯಲ್ಲಿ ಹಗರಣ ಬಯಲಿಗೆಳೆಯುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಬ್ಲಾಕ್ ಮೇಲ್ ಮಾಡುವ ಬದಲು ಧಮ್ ಇದ್ದರೆ ಆ ಕೆಲಸ ಮೊದಲು ಮಾಡಿ ಎಂದು ಸವಾಲು ಹಾಕಿದ್ದಾರೆ. ನಿಮ್ಮ ದುರಾಡಳಿತ, ಭ್ರಷ್ಟಾಚಾರಕ್ಕೆ ಜನ ಬೇಸತ್ತಿದ್ದಾರೆ. ಜನರ ಮುಂದೆ ಹೋಗೋಣ ಜನರ ಅಲೆ ಯಾರ ಪರ ಇದೆ ಅಂತ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.