alex Certify BIG NEWS: ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ; 30-50 ಸಾವಿರ, ಲಕ್ಷಕ್ಕೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ; ಪ್ರತಿಭಾವಂತ ವಿದ್ಯಾರ್ಥಿಗಳ ಗತಿಯೇನು? ಡಿ.ಕೆ. ಶಿವಕುಮಾರ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ; 30-50 ಸಾವಿರ, ಲಕ್ಷಕ್ಕೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ; ಪ್ರತಿಭಾವಂತ ವಿದ್ಯಾರ್ಥಿಗಳ ಗತಿಯೇನು? ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಸರ್ಕಾರ ತೆಗೆಯಲು ನಾವು ಯಾವುದೇ ಅಸ್ತ್ರ ಪ್ರಯೋಗಿಸಬೇಕಿಲ್ಲ. ಜನರೇ ಸರ್ಕಾರವನ್ನು ತೆಗೆಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಸಿಎಂ ಬೊಮ್ಮಾಯಿ ಹಾಗೂ ಅವರ ತಂಡ ಭ್ರಷ್ಟಾಚಾರದ ಪಿತಾಮಹ. ಈ ಹಿಂದೆ ಜನರಿಗೆ ನೀಡಿದ ಭರವಸೆಯನ್ನೇ ಈಡೇರಿಸಿಲ್ಲ. ಈ ಸರ್ಕಾರ ಬರೀ ಭ್ರಷ್ಟಾಚಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

30-50 ಸಾವಿರ, ಲಕ್ಷಕ್ಕೆ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದಾರೆ. ಕಷ್ಟಪಟ್ಟು ಓದಿದ ಮಕ್ಕಳ ಪರಿಸ್ಥಿತಿ ಏನಾಗಬೇಕು? ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್, ಜೆಡಿಎಸ್ ನಿಂದ ಈಗಾಗಲೇ ಹಲವು ನಾಯಕರು ಕಾಂಗ್ರೆಸ್ ಗೆ ಬರುತ್ತಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಈ ಬಾರಿ ಚುನಾವಣೆಯಲ್ಲಿ ಗೆಲ್ಲಲಿಲ್ಲ ಎಂದರೆ ಪಕ್ಷ ವಿಸರ್ಜಿಸುವುದಾಗಿ ಹೇಳಿದ್ದಾರೆ. ಹಾಗಾಗಿ ನಾನು ಜೆಡಿಎಸ್ ನವರು ಬಂದು ಕಾಂಗ್ರೆಸ್ ಗೆ ಸೇರುವಂತೆ ಹೇಳುತ್ತಿದ್ದೇನೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...