alex Certify BIG NEWS: ಸರ್ಕಾರದ ಯೋಜನೆಗಳನ್ನು ವಿವರಿಸುತ್ತಾ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ಯೋಜನೆಗಳನ್ನು ವಿವರಿಸುತ್ತಾ, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಮಂಡ್ಯ: ಮಂಡ್ಯದ ಗೆಜ್ಜಲಗೆರೆ ಕಾಲೋನಿಯ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದು, ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ದಶಪಥ ರಸ್ತೆ ಹೆದ್ದಾರಿಯಿಂದ ಈ ಭಾಗದ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಕಳೆದ ಕೆಲ ದಿನಗಳಿಂದ ದಶಪಥ ಹೆದ್ದಾರಿ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. 2014ಕ್ಕೂ ಮೊದಲು ಇದ್ದ ಸರ್ಕಾರ ಜನರ ಬಗ್ಗೆ ಯಾವುದೆ ಕಾಳಜಿ ತೋರಲಿಲ್ಲ, ದೇಶ, ರಾಜ್ಯದ ಅಭಿವೃದ್ದಿಗಾಗಿ ಶ್ರಮಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

2014ರಿಂದ ಬಡವರ ಪರವಾದ ಸರ್ಕಾರ ಅಧಿಕಾರಕ್ಕೆ ಬಂತು. ದೇಶದಲ್ಲಿ ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾದವು. ಕಳೆದ 9 ವರ್ಷಗಳಿಂದ ಕೇಂದ್ರ ಸರ್ಕಾರ ತಂದ ಜನಪರ ಯೋಜನೆಯಿಂದ ಬಡವರ ಬದುಕು ಸುಧಾರಣೆಯಾಗಿದೆ. ಈ ಭೂಮಿ ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ ಎಂದರು.

3 ಕೋಟಿಗೂ ಹೆಚ್ಚು ಜನರಿಗೆ ಮನೆಗಳನ್ನು ನಿರ್ಮಿಸಲಾಗಿದೆ. ಕರ್ನಾಟಕದಲ್ಲಿಯೂ ಮನೆ ನಿರ್ಮಾಣ, ಕುಡಿಯುವ ನೀರು ಯೋಜನೆ, ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತರಲಾಗಿದೆ. ಜಲ್ ಜೀವನ್ ಮಿಷನ್ ನಡಿ 40 ಲಕ್ಷ ಕುಟುಂಬಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಮಂಡ್ಯ ಜಿಲ್ಲೆಯ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗಿದೆ. 3 ಲಕ್ಷಕ್ಕೂ ಹೆಚ್ಚು ರೈತರಿಗೆ 600 ಕೋಟಿಗೂ ಹೆಚ್ಚು ಹಣ ವರ್ಗಾವಣೆ ಮಾಡಲಾಗಿದೆ. ಕರ್ನಾಟಕದ ವೇಗದ ವಿಕಾಸಕ್ಕೆ ಬಿಜೆಪಿ ಅಗತ್ಯವಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...