ರಾಯಚೂರು: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸ್ಟೇಟಸ್ ಹಾಕಿದ್ದ ಪಂಚಾಯಿತಿ ಕ್ಲರ್ಕ್ ಒಬ್ಬರನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ರಾಯಪ್ಪ ಸಸ್ಪೆಂಡ್ ಆದವರು.
ರಾಯಪ್ಪ ಸರ್ಕಾರದ ವಿರುದ್ಧ ವಾಟ್ಸಪ್ ಸ್ಟೇಟಸ್ ಹಾಕಿದ್ದರು. ಈ ಬಗ್ಗೆ ದೇವದುರ್ಗ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೊಟೀಸ್ ನೀಡಿದ್ದರು. ನೊಟೀಸ್ ಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಕ್ಲರ್ಕ್ ನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.