alex Certify BIG NEWS: ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲು

ಮಂಡ್ಯ: ರಾಜ್ಯದ ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಆಸ್ಪತ್ರೆಯ ಶವಾಗಾರದ ಫ್ರಿಡ್ಜ್ ನಲ್ಲಿ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸರ್ಕಾರಿ ಆಸ್ಪತ್ರೆಯ ಶವಾಗಾರದ ಫ್ರಿಡ್ಜ್ ನಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಅಪರಿಚಿತ ವ್ಯಕ್ತಿಯ ಶವವನ್ನು ಇಟ್ಟಿದ್ದು, ಮೃತದೇಹ ಸಂಪೂರ್ಣವಾಗಿ ಕೊಳೆತು ಹೋಗಿದೆ. ದುರ್ವಾಸನೆ ಬರುತ್ತಿದ್ದ ಕಾರಣ ಶವಾಗಾರ ತಪಾಸಣೆ ನಡೆಸಿದ ವೇಳೆ ಕೆಟ್ಟು ಹೋಗಿರುವ ಫ್ರಿಡ್ಜ್ ನಲ್ಲಿ ಕೊಳೆತ ಶವವಿರುವುದು ತಿಳಿದುಬಂದಿದೆ.

ಶವಾಗಾರದ ಫ್ರಿಡ್ಜ್ ದುರಸ್ತಿ ಮಾಡದ ಅಧಿಕಾರಿಗಳು, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಬೇಜವಾಬ್ದಾರಿ ಕರ್ಮಕಾಂಡಗಳು ಒನ್ನೊಂದಾಗಿ ಹೊರಬರುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...