ಬೆಂಗಳೂರು: ಸರ್ಕಾರಿ ನೌಕರರು ಕೆಲಸಕ್ಕೆ ಗೈರಾಗಿ ಮುಷ್ಕರದಲ್ಲಿ ಭಾಗಿಯಾದರೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅನಧಿಕೃತವಾಗಿ ಕೆಲಸಕ್ಕೆ ಗೈರಾದರೆ ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.
7ನೇ ವೇತನ ಆಯೋಗದ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯಾದ್ಯಂತ ಸರ್ಕಾರಿ ನೌಕರರು ಕೆಲಸಕ್ಕೆ ಗೈರಾಗಿ ಮುಷ್ಕರ ನಡೆಸುತ್ತಿದ್ದು, ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕ್ರಮದ ಕೈಗೊಳ್ಳುವ ಎಚ್ಚರಿಕೆ ನೀಡಿದೆ.