alex Certify ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 63 ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸ್ಫೋಟ; 63 ವೈದ್ಯಕೀಯ ವಿದ್ಯಾರ್ಥಿಗಳಿಗೆ ಸೋಂಕು ದೃಢ

ಚಾಮರಾಜನಗರ: ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಚಾಮರಾಜನಗರದ ಮೆಡಿಕಲ್ ಕಾಲೇಜಿನ 63 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ.

ಯಡಿಪುರ ಬಳಿಯಿರುವ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಿನ್ನೆ 28 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಸೋಂಕು ಇಂದು ಮತ್ತೆ 35 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಒಟ್ಟು 750 ವಿದ್ಯಾರ್ಥಿಗಳ ಪೈಕಿ 63 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು, ಮೆಡಿಕಲ್ ಕಾಲೇಜಿಗೆ ಒಂದು ವಾರ ರಜೆ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...