alex Certify BIG NEWS: ಸರ್ಕಾರ ಹುಡುಗಾಟದ ಮೀಸಲಾತಿ ಘೋಷಿಸಿದೆ; HDK ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರ ಹುಡುಗಾಟದ ಮೀಸಲಾತಿ ಘೋಷಿಸಿದೆ; HDK ಆಕ್ರೋಶ

ಬೆಂಗಳೂರು: ಬಿಜೆಪಿ ಸರ್ಕಾರ ಸಮುದಾಯಗಳ ನಡುವೆ ಗೊಂದಲವುಂಟಾಗುವಂತೆ ಮಾಡಿ ಸಂಘರ್ಷ ಸೃಷ್ಟಿಸಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರದ ನಿರ್ಧಾರದಿಂದಾಗಿ ಬಂಜಾರ ಸಮುದಾಯಕ್ಕೆ ಆತಂಕವುಂಟಾಗಿದೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿರ್ಧಾರಕ್ಕೆ ನನ್ನ ಬೆಂಬಲವಿಲ್ಲ ಎಂದು ಹೇಳಿದರು.

ಸರ್ಕಾರ ಹುಡುಗಾಟದ ಮೀಸಲಾತಿ ಘೋಷಣೆ ಮಾಡಿದೆ. ಸಮುದಾಯಗಳ ನಡುವೆ ಸಂಘರ್ಷ ಸೃಷ್ಟಿಸುತ್ತಿದ್ದಾರೆ. ಇಂತಹ ವಾತಾವರಣ ನಿರ್ಮಾಣವಾಗಲು ಸರ್ಕಾರವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...