ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಸರ್ವತೋಮುಖ ಅಭಿವೃದ್ಧಿಯ, ಉತ್ತಮ ಬಜೆಟ್ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶ್ಲಾಘಿಸಿದ್ದಾರೆ.
ಸಿಎಂ ಬೊಮ್ಮಾಯಿ ಮಂಡಿಸಿದ ಚೊಚ್ಚಲ ಬಜೆಟ್ ಇದಾಗಿದ್ದು, ಪ್ರಧಾನಿ ಮೋದಿ ಆಶಯದಂತೆಯೇ ರೈತರ ಬಗ್ಗೆ ಕಾಳಜಿ ತೋರಿದ ಬಜೆಟ್ ಇದಾಗಿದೆ. ರೈತರಿಗಾಗಿ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ನೀರಾವರಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ಬಜೆಟ್ ನಲ್ಲಿ ಕೃಷಿ, ನೀರಾವರಿ, ನೇಕಾರರು ಎಲ್ಲಾ ವಲಗಳಿಗೂ ಪ್ರಾಮುಖ್ಯತೆ ನೀಡಲಾಗಿದೆ. ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲಾಗಿದೆ. ಕೋವಿಡ್ ನಂತರ ಆರ್ಥಿಕ ಪರಿಸ್ಥಿತಿ ಚೇತರಿಕೆ ಕಾಣುತ್ತಿದೆ. 2,65,720 ಕೋಟಿ ಬಜೆಟ್ ಮಂಡಿಸಿದ್ದಾರೆ. ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ಹೇಳಿದರು.