alex Certify BIG NEWS: ಸರ್ವಾಧಿಕಾರಿ ಎಷ್ಟೇ ಬಲಶಾಲಿಯಾಗಿರಲಿ; ಜನಶಕ್ತಿಗೆ ಮಣಿಯಲೇಬೇಕು; ಇದುವೇ ಪ್ರಜಾಪ್ರಭುತ್ವದ ಸೊಗಸು: ಸಿದ್ದರಾಮಯ್ಯ ಟ್ವೀಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ವಾಧಿಕಾರಿ ಎಷ್ಟೇ ಬಲಶಾಲಿಯಾಗಿರಲಿ; ಜನಶಕ್ತಿಗೆ ಮಣಿಯಲೇಬೇಕು; ಇದುವೇ ಪ್ರಜಾಪ್ರಭುತ್ವದ ಸೊಗಸು: ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

10 ತಿಂಗಳ ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ಆಹಾರ ಹೊರತೆಗೆದು ಅಪತ್ಭಾಂಧವನಾದ ಅಪರಿಚಿತ

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು, ಇದುವೇ ರೈತರ ಸ್ವಾತಂತ್ರೋತ್ಸವ ಎಂದಿದ್ದಾರೆ.

ಕೃಷಿ ಕಾಯ್ದೆ ಅಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರೆಯಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನತೆ ಅಣಿಯಾಗಬೇಕು ಎಂದು ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...