alex Certify BIG NEWS: ಸರ್ವೋದಯ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೂಕಾಟ-ತಳ್ಳಾಟ; ಪೊಲೀಸರೊಂದಿಗೆ ವಾಗ್ವಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ವೋದಯ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೂಕಾಟ-ತಳ್ಳಾಟ; ಪೊಲೀಸರೊಂದಿಗೆ ವಾಗ್ವಾದ

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ್ದು, ಖರ್ಗೆ ಸ್ವಾಗತಕ್ಕೆ ರಾಜ್ಯ ಕಾಂಗ್ರೆಸ್ ಸರ್ವೋದಯ ಸಮಾವೇಶ ನಡೆಸುತ್ತಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆರಂಭವಾಗಿದ್ದು, ಲಕ್ಷಾಂತರ ಜನ ಕಾಂಗ್ರೆಸ್ ಕಾರ್ಯಕರ್ತರು ಸಮಾವೇಶಕ್ಕೆ ಹರಿದು ಬಂದಿದ್ದಾರೆ. ಈ ವೇಳೆ ಸಮಾವೇಶದ ಸ್ಥಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.

ಅರಮನೆ ಮೈದಾನದ ಒಳಗೆ ನುಗ್ಗಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹಾಗೂ ಪೊಲೀಸರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

ಮಾಜಿ ಸಚಿವ ಎಂ.ಬಿ.ಪಾಟಿಲ್ ಹಾಗೂ ಇತರ ನಾಯಕರು ವೇದಿಕೆಗೆ ಆಗಮಿಸುತ್ತಿದ್ದ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...