alex Certify BIG NEWS: ಸಹಾಯಕ ಪ್ರಾಧ್ಯಾಪಕ ಹುದ್ದೆ ಅಕ್ರಮ; ಪ್ರೊಫೆಸರ್ ನಾಗರಾಜ್ 10 ದಿನ ಪೊಲೀಸ್ ಕಸ್ಟಡಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಾಯಕ ಪ್ರಾಧ್ಯಾಪಕ ಹುದ್ದೆ ಅಕ್ರಮ; ಪ್ರೊಫೆಸರ್ ನಾಗರಾಜ್ 10 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಪ್ರೊಫೆಸರ್ ನಾಗರಾಜ್ ಅವರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ.

ಪ್ರೊ. ನಾಗರಾಜ್ ಧಾರವಾಡ ಕರ್ನಾಟಕ ಯುನಿವರ್ಸಿಟಿಯ ವ್ಯಾಲ್ಯುಯೇಷನ್ ರಿಜಿಸ್ಟ್ರಾರ್ ಆಗಿದ್ದು, ಪ್ರೆಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ನಿರ್ಲಕ್ಷ ಹಿನ್ನೆಲೆಯಲ್ಲಿ ನಿನ್ನೆ ಬಂಧನಕ್ಕೀಡಾಗಿದ್ದಾರೆ. ಇಂದು ನಾಗರಾಜ್ ಅವರನ್ನು ಪೊಲೀಸರು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಆರೋಪಿ ಸೌಮ್ಯ ಎಂಬುವವಳನ್ನು ಬಂಧಿಸಿರುವ ಪೊಲೀಸರು, ನಾಗರಾಜ್ ತಂಗಿ ಮಗಳು ಕುಸುಮಳನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...