ಬೆಂಗಳೂರು: ಸಾತನೂರಿನಲ್ಲಿ ವ್ಯಕ್ತಿಯ ನಿಗೂಢ ಸಾವಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದ ವಾಹನದ ಮೇಲೆ ಹಿಂದೂ ಕಾರ್ಯಕರ್ತರು ದಾಳಿ ನಡೆಸುವಾಗ ಸಿಕ್ಕಿಬಿದ್ದಿದ್ದ ವ್ಯಕ್ತಿಯ ನಿಗೂಢ ಸಾವಿಗೆ ಸಿಎಂ ಬೊಮ್ಮಾಯಿ, ಗೃಹ ಸಚಿವರೇ ನೇರ ಹೊಣೆ. ಸಾತನೂರಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಇರ್ಗಿಷ್ ಪಾಷಾ ಅನುಮಾನಾಸ್ಪದ ಸಾವಿಗೆ ಸರ್ಕಾರವೇ ಹೊಣೆ ಎಂದರು.
ನೈತಿಕ ಪೊಲೀಸ್ ಗಿರಿ ಹೆಸರಲ್ಲಿ ಕೊಲೆ ನಡೆದಿದೆ. ಮೃತ ವ್ಯಕ್ತಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.