ವಿಜಯನಗರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಸಾಲು ಸಾಲು ಹೊಡೆತಗಳು ಬೀಳುತ್ತಿದ್ದು, ಹಲವು ನಾಯಕರು ರಾಜೀನಾಮೆ ನಿಡಿದ ಬೆನ್ನಲ್ಲೇ ಇದೀಗ ವಿಜಯನಗರ ಕಾಂಗ್ರೆಸ್ ನಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಪದಾಧಿಕಾರಿಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಹೊಸಪೇಟೆ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಬೇಸರಗೊಂಡು ಎಲ್ಲಾ ಮುಂಚೂಣಿ ಘಟಕಗಳಿಗೂ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಾಮೂಹಿಕ ರಾಜೀನಾಮೆಯನ್ನು ವಿಜಯನಗರ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಾಯಕ ಶೆಟ್ಟರ್ ಅಲ್ಲಗಳೆದಿದ್ದಾರೆ.