ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುಷ್ಕರ ಕೈಬಿಡುವಂತೆ ಸಾರಿಗೆ ನೌಕರರಿಗೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೋವಿಡ್ ನಿಂದಾಗಿ ರಾಜ್ಯ ಸರ್ಕಾರ ಕೂಡ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಾರಿಗೆ ನೌಕರರು ಸರ್ಕಾರವನ್ನು ಒತ್ತಾಯಿಸುವುದು ಸರಿಯಲ್ಲ. ಮುಷ್ಕರದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಮುಷ್ಕರ ಬಿಟ್ಟು ಕೆಲಸಕ್ಕೆ ತೆರಳುವಂತೆ ತಿಳಿಸಿದರು.
ರಾಜ್ಯ ಸರ್ಕಾರ ಕೂಡ ಸಾರಿಗೆ ನೌಕರರ ಸಮಸ್ಯೆ ಬಗ್ಗೆ ಚರ್ಚೆ ನಡೆಸಬೇಕಿತ್ತು. ಅವರ ಬೇಡಿಕೆ ಏನೆಂಬುದನ್ನು ಕೇಳಬೇಕಿತ್ತು. ಆದರೆ ಈ ಸಂದರ್ಭದಲ್ಲಿ ನೌಕರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವುದು ಸರಿಯಲ್ಲ ಎಂದರು.