alex Certify BIG NEWS: ಸಾರ್ವಜನಿಕರಿಗೆ ಬಿಗ್ ರಿಲೀಫ್; ರಾಜ್ಯ ಕಂಪ್ಲೀಟ್ ಓಪನ್ ಗೆ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾರ್ವಜನಿಕರಿಗೆ ಬಿಗ್ ರಿಲೀಫ್; ರಾಜ್ಯ ಕಂಪ್ಲೀಟ್ ಓಪನ್ ಗೆ ಅನುಮತಿ

ಬೆಂಗಳೂರು: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಟಫ್ ರೂಲ್ಸ್, ನೈಟ್ ಕರ್ಫ್ಯೂ ನಿಯಮದಿಂದ ಸ್ವಾತಂತ್ರ್ಯ ನೀಡಿದ್ದು, ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಕುರಿತ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಜನವರಿ 31ರಿಂದ ನೈಟ್ ಕರ್ಫ್ಯೂ ತೆರವಿಗೆ ನಿರ್ಧರಿಸಲಾಗಿದೆ. ರಾಜ್ಯ ಕಂಪ್ಲೀಟ್ ಓಪನ್ ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇನ್ಮುಂದೆ ಯಾವುದೇ ನೈಟ್ ಕರ್ಫ್ಯೂ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಧಾರ್ಮಿಕ ಸ್ಥಳಗಳಲ್ಲಿ ಪೂರ್ಣಪ್ರಮಾಣದ ಸೇವೆಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್ ಗಳಲ್ಲಿ ಶೇ.50ರಷ್ಟು ಸೇವೆ ಪುನರಾರಂಭಿಸಬಹುದು. ಹೋಟೆಲ್, ಪಬ್ , ರೆಸ್ಟೋರೆಂಟ್ ಗಳಿಗೂ ಶೇ.100 ರಷ್ಟು ಅವಕಾಶ ನೀಡಲಾಗಿದೆ.

ಕಚೇರಿಗಳಲ್ಲಿ ಶೇ.100 ರಷ್ಟು ನೌಕರರಿಗೆ ಅನುಮತಿ ನೀಡಲಾಗಿದೆ. ಮದುವೆ ಸಮಾರಂಭಗಳಿಗೆ ಹೊರಾಂಗಣದಲ್ಲಿ 300 ಜನರಿಗೆ ಮಾತ್ರ ಅವಕಾಶ. ಚಿತ್ರಮಂದಿರಗಳಲ್ಲಿ 50:50 ನಿಯಮ ಜಾರಿಗೊಳಿಸಲಾಗಿದೆ. ಜಿಮ್, ಈಜುಕೊಳ, ಕ್ರೀಡಾಚಟುವಟಿಕೆಗಳಿಗೆ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಉಳಿದಂತೆ ಜಾತ್ರೆ, ಸಭೆ-ಸಮಾರಂಭ, ಪ್ರತಿಭಟನೆ, ರ್ಯಾಲಿಗಳಿಗೆ ನಿರ್ಬಂಧ ಮುಂದುವರೆಸಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...