ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೂ ರಾಜ್ಯ ಸರ್ಕಾರ ಈ ಬಾರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಈ ಬಾರಿ 5 ದಿನಗಳ ಕಾಲ ಸರಳವಾಗಿ ಗಣೇಶೋತ್ಸವ ಆಚರಿಸಲು ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ ಎಂದರು.
* ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಬಿಎಂಪಿ, ಜಿಲ್ಲಾಡಳಿತದ ಅನುಮತಿ ಕಡ್ಡಾಯ
* ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ
* ಸರ್ಕಾರಿ ಹಾಗೂ ಖಾಲಿ ಜಾಗಗಳಲ್ಲಿ 5 ದಿನಗಳ ಕಾಲ ಮಾತ್ರ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ
* ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ವ್ಯಾಕ್ಸಿನೇಷನ್ ಅಭಿಯಾನ
* ನಗರ ಪ್ರದೇಶಗಳಲ್ಲಿ ವಾರ್ಡ್ ಗೆ 1ರಂತೆ ಮೂರ್ತಿ ಪ್ರತಿಷ್ಠಾಪಿಸಬಹುದು
* ಗ್ರಾಮೀಣ ಅಥವಾ ಹಳ್ಳಿಗಳಲ್ಲಿ ಸ್ಥಳೀಯಾಡಳಿತದಿಂದ ನಿರ್ಧಾರ
* 50X50 ವಿಸ್ತೀರ್ಣದ ಅಳತೆ ಪೆಂಡಾಲ್ ನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ
* ಯಾವುದೇ ಸಾಂಸ್ಕೃತಿಕ, ಡಿಜೆ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
* ಗಣೇಶ ಮೂರ್ತಿ ವಿಸರ್ಜನೆ ವೇಳೆ ಮೆರವಣಿಗೆ, ವಾದ್ಯಗಳಿಗೆ ನಿರ್ಬಂಧ
* ನಿಗದಿತ ಸದಸ್ಯರಿಂದ ಮಾತ್ರ ನಿಗದಿತ ಸ್ಥಳಗಳಲ್ಲಿ ವಿಸರ್ಜನೆ
* ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಥಾಪನೆಗೆ ಅವಕಾಶ
* ಯಾವುದೇ ಶಾಲಾ-ಕಾಲೇಜುಗಳಲ್ಲಿ ಗಣಪತಿ ಕೂರಿಸುವಂತಿಲ್ಲ