ಈ ಹಿಂದೆ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಿದ್ದ ಕೇಂದ್ರ ಸರ್ಕಾರ, ಇದೀಗ ಸಾರ್ವಜನಿಕ ವಲಯದ ಐಡಿಬಿಐ ಬ್ಯಾಂಕ್ ಖಾಸಗೀಕರಣಕ್ಕೆ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.
ಐಡಿಬಿಐ ಬ್ಯಾಂಕ್ ನಲ್ಲಿ ಕೇಂದ್ರ ಸರ್ಕಾರ ಶೇ.94.71 ರಷ್ಟು ಷೇರುಗಳನ್ನು ಹೊಂದಿದ್ದು ಇವುಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಈ ಷೇರುಗಳ ಪೈಕಿ ಎಲ್ಐಸಿ ಪಾಲು ಶೇ.49.24 ಎಂದು ಹೇಳಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಬ್ಯಾಂಕಿಂಗ್ ವಲಯದಲ್ಲಿ ಬಹಳಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಲಾಗಿದ್ದು, ಈಗಾಗಲೇ ಎನ್.ಪಿ.ಎ. ಇಳಿಮುಖವಾಗಿರುವುದರಿಂದ ಬ್ಯಾಂಕುಗಳ ಹಣಕಾಸು ಪರಿಸ್ಥಿತಿಯೂ ಸುಧಾರಿಸಿದೆ.