
ಯಾದಗಿರಿ: ಸಾಲ ಕೊಡಿಸುವುದಾಗಿ ಹೇಳಿ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್ ನ್ನು ಯಾದಗಿರಿ ಪೊಲೀಸರು ಮಹಾರಾಷ್ಟ್ರದ ಮುಂಬೈನಲ್ಲಿ ಬಂಧಿಸಿದ್ದಾರೆ.
ಜೂನ್ 11ರಂದು ಯಾದಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಂತೋಷ್, ಪಾಂಡು, ಮೆಹಬೂಬ್ ಎಂದು ಗುರುತಿಸಲಾಗಿದೆ.
ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ಹಾಗೂ ರಾಯಚೂರಿನ ಮಾನ್ವಿಯಲ್ಲಿ ಹಲವರು ಮೋಸದ ಗ್ಯಾಂಗ್ ನಿಂದ ಹಣ ಕಳೆದುಕೊಂಡಿದ್ದರು. ಮಾನ್ವಿಯ ರಂಗರಾವ್ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.