ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದ್ದು, ಎರಡೂ ಕ್ಷೇತ್ರಗಳು ಜೆಡಿಎಸ್ ಗೆ ಸಿದ್ಧತಾ ಪರೀಕ್ಷೆ ಇದ್ದಂತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಡಿಎಸ್ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರು ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.
ಲೇಹ್ನಿಂದ ಮನಾಲಿಗೆ ಅತ್ಯಂತ ವೇಗದ ಸೈಕ್ಲಿಂಗ್ ಮಾಡಿ ಗಿನ್ನಿಸ್ ದಾಖಲೆ ನಿರ್ಮಿಸಿದ ಭಾರತೀಯ ಸೇನಾಧಿಕಾರಿ
ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ. ಇಂದಿನ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.