alex Certify BIG NEWS: ಸಿಇಟಿ ರ್ಯಾಂಕ್ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಇಟಿ ರ್ಯಾಂಕ್ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

ಸಿಇಟಿ ರ‍್ಯಾಂಕ್ ಪ್ರಕಟಿಸುವ ವೇಳೆ ತಮ್ಮನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ರಿಪೀಟರ್ಸ್ ವಿದ್ಯಾರ್ಥಿಗಳು ತಮ್ಮ ಪರ ತೀರ್ಪು ಬಂದ ಕಾರಣ ಸಂತಸಗೊಂಡಿದ್ದರು. ಆದರೆ ಇದೀಗ ರಾಜ್ಯ ಸರ್ಕಾರ, ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದು, ಈ ವಿದ್ಯಾರ್ಥಿಗಳಿಗೆ ಮತ್ತೆ ಆತಂಕ ಶುರುವಾಗಿದೆ.

ಸೋಮವಾರದಂದು ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ತಮ್ಮ ನಿವಾಸದಲ್ಲಿ ಕೆಇಎ ಹಾಗೂ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದ ಬಂದಿದೆ.

ಸಭೆ ಬಳಿಕ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಈ ಬಾರಿ 25,000 ರಿಪೀಟರ್ಸ್ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದು, ಹೀಗಾಗಿ ಹೊಸ ವಿದ್ಯಾರ್ಥಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಸರ್ಕಾರ ತೀರ್ಮಾನ ಕೈಗೊಂಡಿತ್ತು. ಆದರೆ ಹೈಕೋರ್ಟ್ ರ್ಯಾಂಕ್ ರದ್ದು ಮಾಡಿರುವುದರಿಂದ ಒಂದೂವರೆ ಲಕ್ಷ ಹೊಸ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...