ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಮೂರು ದಿನಗಳವರೆಗೆ ನಡೆಯಲಿದೆ.
ರಾಜ್ಯದ 530 ಕೇಂದ್ರಗಳಲ್ಲಿ ಬೆಳಿಗ್ಗೆ 10:30ರಿಂದ ಸಿಇಟಿ ಪರೀಕ್ಷೆ ಆರಂಭವಾಗಿದ್ದು, ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ಬರೆಯುವ 12 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ರೇಡಿಯೊ ಜಾಕಿಯಾದ ಮಲಯಾಳಂ ನಟ ಜಯಸೂರ್ಯ
ಬೆಂಗಳೂರು, ಶಿವಮೊಗ್ಗ ಹಾಗೂ ಕೋಲಾರದ ತಲಾ ಓರ್ವ ವಿದ್ಯಾರ್ಥಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಸೋಂಕಿನ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಮಾಡಲಾಗಿದೆ.
ಇಂದು ಜೀವಶಾಸ್ತ್ರ, ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ನಾಳೆ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ಹಾಗೂ ಆಗಸ್ಟ್ 30ರಂದು ಹೊರನಾಡು ಮತ್ತು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ.