ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಸಿಎಂ ಆಗುವುದು ಹಾಗಿರಲಿ ಮೊದಲು ಚುನಾವಣೆಯನ್ನು ಗೆಲ್ಲಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಆರಂಭವಾಗಿದೆ. ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಎರಡು ಭಾಗವಾಗಲಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಹೇಳಿದರು.
BREAKING NEWS: ಭವಾನಿಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಮಮತಾ ಬ್ಯಾನರ್ಜಿ ಮುನ್ನಡೆ
ಸಿದ್ದರಾಮಯ್ಯ ಸಿಎಂ ಆಗುವ ಬಗ್ಗೆ ಹುಚ್ಚು ಕನಸು ಕಾಣುವುದನ್ನು ಬಿಟ್ಟು ಎಲೆಕ್ಷನ್ ನಲ್ಲಿ ಗೆಲ್ಲುವುದು ಹೇಗೆಂದು ಯೋಚಿಸಲಿ. ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದು ಏಕೆ ಎಂಬುದನ್ನು ಹೇಳಲಿ. ಸಿದ್ದರಾಮಯ್ಯನವರಿಗೆ ಅಧಿಕಾರವೊಂದೇ ಗುರಿ. ಸದನದಲ್ಲಿ ಜಾತಿ ಗಣತಿ ವರದಿ ಬಗ್ಗೆ ಮಾತನಾಡದವರು, ಈಗ ಪ್ರಚಾರಕ್ಕಾಗಿ ಜಾತಿ ಗಣತಿ ಬಗ್ಗೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.