ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನಗಳು ನಡೆದಿವೆ. ಸಿಎಂ ಕಚೇರಿ, ಸಿಎಂ ಲೀಗಲ್ ಟೀಂ ನಿಂದ ಅಧಿಕಾರ ದುರ್ಬಳಕೆ ಮಾಡಲಾಗುತ್ತಿದೆ. ನಮ್ಮ ಅಭ್ಯರ್ಥಿಗಳ ಅಫಿಡವಿಟ್ ಡೌನ್ ಲೋಡ್ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.
ಖುದ್ದು ಸಿಎಂ ಕಚೇರಿ ಸೂಚನೆ ಮೇರೆಗೆ ಇದೆಲ್ಲವೂ ನಡೆಯುತ್ತಿದೆ. ಇದಕ್ಕೆ ಸಿಎಂ ಬೊಮ್ಮಾಯಿ ಅವರೇ ನೇರ ಹೊಣೆ. ಮುಖ್ಯಮಂತ್ರಿಗಳ ಕಚೇರಿಯ ಕಾಲ್ ಡೀಟೇಲ್ಸ್ ತೆಗೆಯಬೇಕು. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.