alex Certify BIG NEWS: ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಮಾಯವಾದ ‘ಕನ್ನಡ’; ಸರ್ಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಮಾಯವಾದ ‘ಕನ್ನಡ’; ಸರ್ಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣನೆ

ಬೆಂಗಳೂರು: ಕರ್ನಾಟಕದಲ್ಲೇ ಕನ್ನಡಕ್ಕೆ ಮಾನ್ಯತೆ ಇಲ್ಲವೇ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಕಾರಣ ಸ್ವತಃ ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ ಅನುಮಾನಕ್ಕೆ ಕಾರಣವಾಗಿದೆ.

ರಾಜೀವ್ ಗಾಂಧಿ ಆಸ್ಪತ್ರೆ ಆವರಣದಲ್ಲಿ ನಡೆದ ಕೋವಿಡ್ ಗಾಗಿ ಪ್ರತ್ಯೇಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಲ್ಲಿಯೂ ಕನ್ನಡದ ಸುಳಿವು ಇಲ್ಲದಿರುವುದು ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿಂದೆ ಮೆಟ್ರೋ ಉದ್ಘಾಟನೆ ಸಂದರ್ಭದಲ್ಲಿಯೂ ಕೂಡ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಜನರಿಂದ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು ಮತ್ತದೆ ಕಥೆ ಮುಂದುವರೆಸಿದ್ದಾರೆ.

ಬದುಕು ಕಟ್ಟಿಕೊಟ್ಟ ಪಕ್ಷದ ಬಗ್ಗೆ ‘ಸಿದ್ಧಹಸ್ತ’ರ ಫರ್ಮಾನು: ಸಿದ್ಧರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗು

ಆಸ್ಪತ್ರೆಯ ಅಡಿಗಲ್ಲಿನಲ್ಲೂ ಕನ್ನಡ ಭಾಷೆ ಬಳಕೆ ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ. ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲಿ ಮತ್ತೆ ಮತ್ತೆ ಇಂಥ ಎಡವಟ್ಟು ನಡೆಯುತ್ತಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲೇ ಕನ್ನಡ ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...