ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು, ಇಂದು ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆ ವಿಚಾರವಾಗಿ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಆದರೆ ಈ ನಡುವೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಇನ್ನೂ ಮೂರು ತಿಂಗಳು ಸಂಪುಟ ವಿಸ್ತರಣೆ ನಡೆಯಲ್ಲಾ ಎಂದು ಖಡಕ್ ಆಗಿ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಸಧ್ಯಕ್ಕೆ ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಮುಗಿಯುವವರೆಗೆ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಇಲ್ಲ. ಈ ಬಗ್ಗೆ ವರಿಷ್ಠರು ನನಗೆ ಮಾಹಿತಿ ನೀಡಿಲ್ಲ, ಆದರೆ ಸಿಎಂ ಬೊಮ್ಮಾಯಿ ಅವರೆ ಖುದ್ದು ನನಗೆ ಸ್ಪಷ್ಟನೆ ನೀಡಿದ್ದಾರೆ ಎಂದರು.
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು, ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರು ಎಂದು ಹೇಳಿದರು.
ಒಟ್ಟಾರೆ ಸಿಎಂ ದೆಹಲಿ ಭೇಟಿ ಕುತೂಹಲ ಮೂಡಿಸಿದ್ದು, ಹೈಕಮಾಂಡ್ ಒಪ್ಪಿಸಿ ಸಂಪುಟ ವಿಸ್ತರಣೆಗೆ ಮುಂದಾಗುತ್ತಾರಾ? ಈ ಮೂಲಕ ಅಸಮಾಧಾನಿತ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಾರಾ ಕಾದುನೋಡಬೇಕು.