alex Certify BIG NEWS: ಸಿಎಂ ನಿವಾಸಕ್ಕೆ ಸಚಿವರು, ಶಾಸಕರು ದೌಡು; ಸಿಎಂ ‘ರಾಜೀನಾಮೆ ಬಾಂಬ್’ ಬೆನ್ನಲ್ಲೇ ಗರಿಗೆದರಿದ ರಾಜಕೀಯ ಚಟುವಟಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ನಿವಾಸಕ್ಕೆ ಸಚಿವರು, ಶಾಸಕರು ದೌಡು; ಸಿಎಂ ‘ರಾಜೀನಾಮೆ ಬಾಂಬ್’ ಬೆನ್ನಲ್ಲೇ ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು: ವರಿಷ್ಠರು ಸೂಚಿಸಿದರೆ ತಕ್ಷಣ ರಾಜೀನಾಮೆ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಕಾವೇರಿ ನಿವಾಸ ಇದೀಗ ರಾಜಕೀಯದ ಹೈವೋಲ್ಟೇಜ್ ಅಖಾಡವಾಗಿ ಪರಿಣಮಿಸಿದೆ.

ಸಿಎಂ ಯಡಿಯೂರಪ್ಪ ರಾಜೀನಾಮೆ ಹೇಳಿಕೆ ಬಾಂಬ್ ಸಿಡಿಸುತ್ತಿದ್ದಂತೆ ಇದೀಗ ಸಚಿವರು, ಶಾಸಕರು ಸಿಎಂ ಕಾವೇರಿ ನಿವಾಸಕ್ಕೆ ದೌಡಾಯಿಸಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂಬ ಭರವಸೆಯನ್ನು ನೀಡುತ್ತಿದ್ದಾರೆ. ಅಲ್ಲದೇ ನಾಯಕತ್ವ ಬದಲಾವಣೆ ಕುರಿತಾಗಿ ಹೇಳಿಕೆಗಳನ್ನು ನೀಡುತ್ತಿರುವ ವಿರೋಧಿ ಬಣದ ಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ಕೂಡ ನಡೆದಿದೆ ಎನ್ನಲಾಗಿದೆ.

ಈಗಾಗಲೇ ಸಚಿವರಾದ ಭೈರತಿ ಬಸವರಾಜ್, ನಾರಾಯಣಗೌಡ, ಬಿ.ಶ್ರೀರಾಮುಲು, ಶಾಸಕರಾದ ರಘು, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರು ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದು, ಮಾತುಕತೆ ನಡೆಸಿದ್ದಾರೆ. ಒಟ್ಟಾರೆ ಸಿಎಂ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಶುರುವಾಗಿರುವುದಂತು ಸ್ಪಷ್ಟ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...