ದಾವಣಗೆರೆ: ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ಕಪೋಲಕಲ್ಪಿತ. ಇದು ಕಾಂಗ್ರೆಸ್ ನಾಯಕರ ಪಿತೂರಿಯಷ್ಟೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ವಿಜಯೇಂದ್ರ, ಬಿಟ್ ಕಾಯಿನ್ ಪ್ರಕರಣ 3-4 ವರ್ಷ ಹಿಂದಿನದ್ದು. ಇದು ಬೊಮ್ಮಾಯಿ ಸಿಎಂ ಆದ ಬಳಿಕ ನಡೆದ ಘಟನೆ ಅಲ್ಲ. ಈಗಾಗಲೇ ಪ್ರಕರಣದ ತನಿಖೆ ಬಗ್ಗೆ ಸಿಎಂ ಸ್ಪಷ್ಟಪಡಿಸಿದ್ದಾರೆ. ತನಿಖೆ ಬಳಿಕ ಯಾರು ತಪ್ಪು ಮಾಡಿದ್ದಾರೆ ಎಂಬುದು ಗೊತ್ತಾಗುತ್ತೆ ಎಂದರು.
ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. ವಿಚಿತ್ರ ಏನೆಂದರೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಪ್ರಕರಣದಲ್ಲಿ ಯಾರೇ ಪ್ರಭಾವಿಗಳಿರಲಿ ಅವರನ್ನು ಬಿಡುವ ಪ್ರಶ್ನೆ ಇಲ್ಲ ಎಂದು ಹೇಳಿದರು.
ಜೀವನದಲ್ಲೇ ಮೊದಲ ಬಾರಿ ಪಿಜ್ಜಾಗೆ ಬಾಯಿ ಹಾಕಿದ ಈ ಅಜ್ಜಿಯ ಮುಖಭಾವ ನೀವು ನೋಡ್ಲೇಬೇಕು….!
ಸಿಎಂ ಬದಲಾಗುತ್ತಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ ವೈ ವಿಜಯೇಂದ್ರ, ಚುನಾವಣೆಗೆ ಇನ್ನೂ ಒಂದುವರೆ ವರ್ಷ ಬಾಕಿಯಿದೆ. ಅಲ್ಲಿಯವರೆಗೂ ಬೊಮ್ಮಾಯಿಯವರೇ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಪಿತೂರಿಯಷ್ಟೆ. ಆಡಳಿತ ಕುಂಠಿತ ಮಾಡಲು ಕಾಂಗ್ರೆಸ್ ಯತ್ನಿಸುತ್ತಿದೆ. ರಾಜ್ಯದ ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಮಾಡುವ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಹೇಳಿದರು.