alex Certify BIG NEWS: ಸಿಎಂ ಬದಲಾವಣೆ ಕಾಂಗ್ರೆಸ್ ಕಾಣುತ್ತಿರುವ ಕನಸು; ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಶೀಘ್ರವೇ ಗೊತ್ತಾಗಲಿದೆ; ತಿರುಗೇಟು ನೀಡಿದ ಸಚಿವ ಸುಧಾಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬದಲಾವಣೆ ಕಾಂಗ್ರೆಸ್ ಕಾಣುತ್ತಿರುವ ಕನಸು; ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಶೀಘ್ರವೇ ಗೊತ್ತಾಗಲಿದೆ; ತಿರುಗೇಟು ನೀಡಿದ ಸಚಿವ ಸುಧಾಕರ್

ಬೆಂಗಳೂರು: ಸಿಎಂ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಗಾಜಿನ ಮನೆಯಲ್ಲಿ ನಿಂತು ಅನ್ಯರತ್ತ ಕಲ್ಲು ತೂರುತ್ತಿರುವ ಕಾಂಗ್ರೆಸಿಗರ ಮನಃಸ್ಥಿತಿಯ ಬಗ್ಗೆ ಅಯ್ಯೋ ಎನ್ನಿಸುತ್ತಿದೆ. ದಿಲ್ಲಿ ಮಾಲೀಕರು ಕಳುಹಿಸಿದ ಚೀಟಿ ಆಧಾರದ ಮೇಲೆ ಮುಖ್ಯಮಂತ್ರಿಗಳನ್ನು ಬದಲಾಯಿಸಿದ ಘನ ಉದಾಹರಣೆ ನಿಮ್ಮ ಪಕ್ಷಕ್ಕೆ ಮಾತ್ರ ಇದೆ ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಆಳ್ವಿಕೆ ಕಾಲದಲ್ಲಿ ಸಿಎಂ ಎಂದರೆ ಚೀಫ್ ಮಿನಿಸ್ಟರ್ ಬದಲು ಚೀಟಿ ಮಿನಿಸ್ಟರ್ ಎಂಬಂತಾಗಿತ್ತು. ದಿಲ್ಲಿ ಪೋಸ್ಟ್ ಮ್ಯಾನ್ ಗಳು ಕಳುಹಿಸಿದ ಚೀಟಿ ಆಧಾರದ ಮೇಲೆ ಕಾಂಗ್ರೆಸ್ ಬದಲಾಯಿಸಿದ ಮುಖ್ಯಮಂತ್ರಿಗಳ ಸಂಖ್ಯೆಯ ಲೆಕ್ಕ ಕೊಡಬೇಕೆ? ಮುಖ್ಯಮಂತ್ರಿ ಸ್ಥಾನದ ಘನತೆ- ಗೌರವಗಳನ್ನು ಹಾಳುಗೆಡವಿದ್ದೇ ಕಾಂಗ್ರೆಸ್. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮನೆಯ ಗೇಟ್ ಕೀಪರ್ ಗಳ ರೀತಿ ಕಾಂಗ್ರೆಸ್ ಮುಖ್ಯಮಂತ್ರಿಗಳು ವರ್ತಿಸಿದ್ದು ಇತಿಹಾಸ. ಆದರೆ ಮುಖ್ಯಮಂತ್ರಿ ಗಾದಿಯ ಕನಸು ಕಾಣುತ್ತಿರುವ ರಾಜ್ಯದ ಇಬ್ಬರು ಹಿರಿಯ ನಾಯಕರು ಈಗಲೇ ಗಾಂಧಿ ಕುಟುಂಬದ ಗೇಟ್ ಕಾಯುತ್ತಿರುವುದು ವರ್ತಮಾನ ಎಂದು ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಎಂಬುದು ಕಾಂಗ್ರೆಸ್ ಕಾಣುತ್ತಿರುವ ಕನಸು. ಬೊಮ್ಮಾಯಿ ಅವರ ದಕ್ಷ ನಾಯಕತ್ವದಲ್ಲಿ ಬಿಜೆಪಿ ಸರಕಾರ ಸುಭದ್ರವಾಗಿದೆ. ಆದರೆ ಕಾಂಗ್ರೆಸ್ ನ ಡಬಲ್ ಡೋರ್ ಬಸ್ಸಿನಿಂದ ಯಾರು, ಯಾರನ್ನು ಕೆಳಗಿಳಿಸುತ್ತಾರೆ ಎಂಬುದು ಸದ್ಯದಲ್ಲೇ ಗೊತ್ತಾಗುತ್ತದೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ದೇವರಾಜ್ ಅರಸು ಅವರು ಇನ್ನೂ ಅಧಿಕಾರದಲ್ಲಿದ್ದಾಗಲೇ ಗುಂಡಾರಾವ್ ಅವರನ್ನು ದೆಹಲಿಗೆ ಕರೆಸಿಕೊಂಡು ನೀವೇ ಸಿಎಂ ಎಂದಿದ್ದರು ಇಂದಿರಾ ಗಾಂಧಿ ಅವರು. ಶರ್ಟು ಬದಲಾಯಿಸುವಷ್ಟೇ ವೇಗವಾಗಿ ವಿರೇಂದ್ರ ಪಾಟೀಲ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದರು ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರು. ಕರ್ನಾಟಕ ಕಂಡಂತಹ ಧೀಮಂತ, ಜನಪ್ರಿಯ ನಾಯಕರುಗಳಾದ ನಿಜಲಿಂಗಪ್ಪ, ದೇವರಾಜು ಅರಸು, ವೀರೇಂದ್ರ ಪಾಟೀಲ, ಎಸ್.ಬಂಗಾರಪ್ಪ ಮುಂತಾದವರನ್ನ ಕಾಂಗ್ರೆಸ್ ಹೈಕಮಾಂಡ್ ಹೇಗೆ ನಡೆಸಿಕೊಂಡಿದೆ ಎಂಬುದನ್ನು ಜನ ಮರೆತಿಲ್ಲ.

ನಮ್ಮ ರಾಜ್ಯ ಅಷ್ಟೇ ಅಲ್ಲ, ಮಹಾರಾಷ್ಟ್ರದಲ್ಲಿ ಶರದ್ ಪವಾರ್, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ಮುಂತಾದ ಅನೇಕ ಪ್ರಭಾವಿ ನಾಯಕರು ಕಾಂಗ್ರೆಸ್ ಪಕ್ಷ ತೊರೆಯಲು ಕಾರಣ ನಿಮ್ಮ ಹೈಕಮಾಂಡ್ ಸಂಸ್ಕೃತಿ ಅಲ್ಲದೆ ಇನ್ನೇನು? ಸ್ವಪಕ್ಷದವರನ್ನು ಬಿಡಿ ತಮ್ಮ ತಾಳಕ್ಕೆ ಕುಣಿಯದ ಬೇರೆ ಪಕ್ಷದ ಮುಖ್ಯಮಂತ್ರಿಗಳನ್ನೂ ಸಹಿಸಿದ ಕಾಂಗ್ರೆಸ್ ಹೈಕಮಾಂಡ್ ಸಂವಿಧಾನದ 356ನೇ ವಿಧಿಯನ್ನು ಬರೋಬ್ಬರಿ 93 ಬಾರಿ ದುರುಪಯೋಗ ಮಾಡಿ ಸರ್ಕಾರಗಳನ್ನು ಉರುಳಿಸಿರುವುದು ಕರಾಳ ಸತ್ಯ. ಇಂತಹ ಹೈಕಮಾಂಡ್ ಎಂಬ ವಿಕೃತಿಯ ಸೃಷ್ಟಿಕರ್ತರಾದ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಪಾಠ ಕಲಿಯಬೇಕಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...