alex Certify BIG NEWS: ಸಿಎಂ ಬದಲಾವಣೆ ಕೇವಲ ಗುಮಾನಿ; ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಅರುಣ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬದಲಾವಣೆ ಕೇವಲ ಗುಮಾನಿ; ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಅರುಣ್ ಸಿಂಗ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಸಿಎಂ ಬದಲಾವಣೆ ಕೇವಲ ಗುಮಾನಿ. ಬದಲಾವಣೆ ಚರ್ಚೆ ಕೇವಲ ಕಪೋಲಕಲ್ಪಿತ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ನಾಯಕತ್ವ, ಮಾರ್ಗದರ್ಶನದಲ್ಲಿ ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಿಎಂ ಬೊಮ್ಮಾಯಿ ಕಾಮನ್ ಮ್ಯಾನ್. ಉತ್ತಮ ಆಡಳಿತ ಜನರ ಬಯಕೆ ಕೂಡ ಆಗಿದೆ. ಈ ನಿಟ್ಟಿನಲ್ಲಿ ಸಿಎಂ ಉತ್ತಮ ಆಡಳಿತ ನೀಡುತ್ತಿದ್ದಾರೆ. ಹೀಗಾಗಿ ಬದಲಾವಣೆ ಪ್ರಶ್ನೆಯೇ ಇಲ್ಲ. ಕಾಲ್ಪನಿಗ ಪ್ರಶ್ನೆಗಳಿಗೆ ಉತ್ತರ ನೀಡಲ್ಲ ಎಂದು ಹೇಳಿದರು. ಈ ಮೂಲಕ ರಾಜ್ಯದಲ್ಲಿನ ನಾಯಕತ್ವ ಬದಲಾವಣೆ ಚರ್ಚೆಗೆ ಮತ್ತೆ ತೆರೆ ಎಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...