alex Certify BIG NEWS: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಿಎಂ H.D.ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಿಎಂ H.D.ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ದಿವಸ್ ಆಚರಣೆ ಪ್ರಶ್ನಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಒಂದು ಭಾಷೆಯನ್ನು ಮಾತ್ರ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯ. ಭಾರತವು ಸಾವಿರಾರು ಭಾಷೆ ಹಾಗೂ ಉಪಭಾಷೆಗಳನ್ನು ಒಳಗೊಂಡ, 560ಕ್ಕೂ ಹೆಚ್ಚು ಸಂಸ್ಥಾನಗಳು ಒಪ್ಪಿ ಸೇರಿರುವ ಹಾಗೂ ಸಾಂಸ್ಕೃತಿಕವಾಗಿ ಬಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟ. ಇಂಥ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರ ಮೆರೆಸುವುದು ಸರಿಯಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೆ.14ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ರಾಜ್ಯ ಸರ್ಕಾರ ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ಕರ್ನಾಟಕ ಸರ್ಕಾರದ ವತಿಯಿಂದ ನಮ್ಮ ರಾಜ್ಯದ ಜನತೆಯ ತೆರಿಗೆ ಹಣದಲ್ಲಿ ಯಾವುದೇ ಕಾರಣಕ್ಕೂ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಆಗ್ರಹಿಸುತ್ತೇನೆ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...