alex Certify BIG NEWS: ಸಿಎಂ ಬೊಮ್ಮಾಯಿಗೆ ಪ್ರತಿಭಟನೆಯ ಬಿಸಿ; ಆಶ್ರಯ ನಿವಾಸಿಗಳ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಬೊಮ್ಮಾಯಿಗೆ ಪ್ರತಿಭಟನೆಯ ಬಿಸಿ; ಆಶ್ರಯ ನಿವಾಸಿಗಳ ಆಕ್ರೋಶ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದೆ. ಆಶ್ರಯ ನಿವಾಸಿಗಳು ಸಿಎಂ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

209 ಮನೆಗಳ ಹಂಚಿಕೆ ಹಾಗೂ ಹಕ್ಕುಪತ್ರ ವಿತರಣೆಗೆ ಆಗ್ರಹಿಸಿ ಆಶ್ರಯ ಮನೆ ನಿವಾಸಿಗಳು ಹುಬ್ಬಳ್ಳಿಯ ಆದರ್ಶನಗರದಲ್ಲಿರುವ ಸಿಎಂ ಬೊಮ್ಮಾಯಿ ಮನೆ ಎದುರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಶ್ರಯ ಮನೆ ನಿವಾಸಿಗಳು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಲು ಆದರ್ಶನಗರದಲ್ಲಿರುವ ಸಿಎಂ ಬೊಮ್ಮಾಯಿ ನಿವಾಸಕ್ಕೆ ಬಂದಿದ್ದರು. ಈ ವೇಳೆ ಸಿಎಂ ಬೊಮ್ಮಾಯಿ ಮನವಿ ಸ್ವೀಕರಿಸದೇ ತೆರಳಿದ್ದರು. ಇದರಿಂದ ಆಕ್ರೋಶಗೊಂಡ ಆಶ್ರಯ ನಿವಾಸಿಗಳು ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...