ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹನುಮಾನ್ ಚಾಲಿಸ ಪಠಿಸುವ ಮೂಲಕ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಯ ವಿಜಯನಗರದ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ ಹನುಮಾನ್ ಚಾಲಿಸ ಪಠಣ ಮಾಡಿದರು. ಈ ವೇಳೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ, ಸ್ಥಳೀಯ ನಿವಾಸಿಗಳು ಸಿಎಂ ಗೆ ಸಾಥ್ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನಿಂದ ಪೇಸಿಎಂ ಹೋಮ ನಡೆಸಿರುವ ವಿಚಾರವಾಗಿ ತಂತ್ರಮಂತ್ರ ಯಾವುದು ನಡೆಯುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ. ಈಬಾರಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.