ಬೆಂಗಳೂರು: ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಹೀಗಿದ್ದರೂ ಯಾವುದೇ ಕ್ರಮ ಕೈಗೊಳ್ಳುವ ಕೆಲಸ ನಡೆಯುತ್ತಿಲ್ಲ, ’ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಜನರಿಗೆ ರಕ್ಷಣೆಯೇ ಇಲ್ಲದಾಗಿದೆ. ಸಮಾಜದಲ್ಲಿ ಜನರು ಭಯದಿಂದ ಬದುಕುವಂತಾಗಿದೆ. ಸರ್ಕಾರದಿಂದ ಯಾರನ್ನೂ ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ. ಇಂಟಲಿಜನ್ಸ್ ಕೂಡ ಸಿಎಂ ಬಳಿಯೇ ಇದೆ. ಆದರೂ ರಾಜ್ಯದಲ್ಲಿ ಹತ್ಯೆಗಳು ಮುಂದುವರೆದಿದೆ. ಈ ಘಟನೆಗಳ ಹೊಣೆಯನ್ನು ಸಿಎಂ ಬೊಮ್ಮಾಯಿ ಹೊರಬೇಕು. ಜನರನ್ನು ರಕ್ಷಿಸಲಾಗದ ಸರ್ಕಾರ… ಬೊಮ್ಮಾಯಿ ದುರ್ಬಲ ಸಿಎಂ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅರಗ ಜ್ಞಾನೇಂದ್ರ ಅವರಿಗೆ ಗೃಹ ಸಚಿವರಾಗಿ ಮುಂದುವರೆಯುವ ನೈತಿಕತೆ ಇಲ್ಲ, ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದಮೇಲೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ ಎಂದು ಆಗ್ರಹಿಸಿದರು.
ಪ್ರವೀಣ್ ನೆಟ್ಟಾರು, ಫಾಜಿಲ್ ಯಾರೇ ಆಗಲಿ ಜೀವ ಜಿವವವೇ, ಕೊಲೆಗಡುಕರನ್ನು ಮೊದಲು ಬಲಿ ಹಾಕಬೇಕಿದೆ. ಅಪರಾಧಿಗಳಿಗೆ ತಕ್ಷಣ ಕಠಿಣ ಶಿಕ್ಷೆ ಕೊಡಬೇಕು. ಮತಾಂಧ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲಿ ಎಂದು ಒತ್ತಾಯಿಸಿದರು.