ಬೆಂಗಳೂರು: ಕೊರೊನಾ ಆತಂಕದ ನಡುವೆ ಈಬಾರಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೇ? ಬೇಡವೇ ಎಂಬ ಬಗ್ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಈಗಾಗಲೇ ಈ ನಿಟ್ಟಿನಲ್ಲಿ ಒಂದು ಸುತ್ತಿನ ಸಭೆ ನಡೆದಿದ್ದು, ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಮತ್ತೊಂದು ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪಾಪಿಗೆ ಮರಣ ದಂಡನೆ
ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜ್ಯಕ್ಕೂ ಮೂರನೇ ಅಲೆ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮಗಳ ಅಗತ್ಯವಿರುವುದರಿಂದ ಗಡಿ ಜಿಲ್ಲೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಬೇಡ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಅಲ್ಲದೇ ಗಣೇಶ ಮೂರ್ತಿ ಮೆರವಣಿಗೆಗೆ ಹಾಗೂ ವೇದಿಕೆಯಲ್ಲಿ ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು. ಕೇವಲ ಮೂರು ದಿನ ಮಾತ್ರ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಬೇಕು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಈ ನಿಟ್ಟಿನಲ್ಲಿ ಷರತ್ತುಬದ್ಧ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಸರ್ಕಾರ ಅನುಮತಿ ನೀಡುವ ನಿಟ್ಟಿನಲ್ಲಿ ಇಂದೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ದಟ್ಟವಾಗಿದೆ.