ಧಾರವಾಡ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವವೂ ಜೋರಾಗಿದೆ. ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ರದ್ದಾದ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿ ಕುಸುಮಾ ಶಿವಳ್ಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಬೀಡು ಬಿಟ್ಟಿದ್ದು, ಹುಬ್ಬಳ್ಳಿಯ ಆದರ್ಶನಗರದಲ್ಲಿರುವ ನಿವಾಸದಲ್ಲಿ ಕುಂದಗೋಳ ಶಾಸಕಿ ಕುಸುಮಾ ಶಿವಳ್ಳಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇಂದು ಕುಂದಗೋಳದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ರದ್ದಾಗಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿ ಕುಸುಮಾ ಶಿವಳ್ಳಿ ಸಿಎಂ ಬೊಮ್ಮಾಯಿ ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಮನೆ ಮಾಡುವಂತೆ ಮಾಡಿದೆ.