ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿರುವಾಗಲೇ ಜಿ.ಟಿ.ದೇವೇಗೌಡ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು ಕುತೂಹಲ ಇಮ್ಮಡಿಗೊಳಿಸಿದೆ.
ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸಿಎಂ ಭೇಟಿಯಾದ ಜಿ.ಟಿ.ದೇವೇಗೌಡ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಜಿಟಿಡಿ, ಬೇರೆಯವರಿಗೆ ಮಾರ್ಗದರ್ಶನ ನೀಡುವ ಹಂತಕ್ಕೆ ಬೆಳೆದಿದ್ದೇನೆ. ಹೀಗಿರುವಾಗ ದಾರಿ ತಪ್ಪಿಸುವ ನಿರ್ಣಯ ಕೈಗೊಳ್ಳುವುದಿಲ್ಲ ಎಂದು ಹೇಳಿದರು.
ಸ್ಟಾರ್ಟ್ ಅಪ್ ಮೂಲಕ ನವಭಾರತ ನಿರ್ಮಾಣ: ‘ಮನ್ ಕಿ ಬಾತ್’ನಲ್ಲಿ ಮೋದಿ
ಬೇರೆ ಪಕ್ಷ ಸೇರುವ ಬಗ್ಗೆ ಇನ್ನೂ ನಿರ್ಣಯಿಸಿಲ್ಲ. ಕ್ಷೇತ್ರದ ಜನರ ಜತೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.