ಬೆಂಗಳೂರು: ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಇಂದು ಶಿವರಾಜ್ ಕುಮಾರ್ ದಂಪತಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.