alex Certify BIG NEWS: ಸಿಎಂ ಭೇಟಿಯಾದ ಹೆಚ್ ವಿಶ್ವನಾಥ್; ತೀವ್ರ ಕುತೂಹಲ ಮೂಡಿಸಿದ ಎಂ ಎಲ್ ಸಿ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಭೇಟಿಯಾದ ಹೆಚ್ ವಿಶ್ವನಾಥ್; ತೀವ್ರ ಕುತೂಹಲ ಮೂಡಿಸಿದ ಎಂ ಎಲ್ ಸಿ ನಡೆ

ಬೆಂಗಳೂರು: ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಹೆಚ್.ವಿಶ್ವನಾಥ್ ಸಿಎಂ ಬೊಮ್ಮಾಯಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದ ಹೆಚ್.ವಿಶ್ವನಾಥ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು.

ಕಾಂಗ್ರೆಸ್ ಸೇರ್ಪಡೆ ಘೋಷಣೆ ಬಳಿಕ ಇದೀಗ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...