alex Certify BIG NEWS: ಸಿಎಂ ಭೇಟಿ ಬಳಿಕ ಈಶ್ವರಪ್ಪ ರಾಜೀನಾಮೆಗೆ ನಿರ್ಧಾರ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ಭೇಟಿ ಬಳಿಕ ಈಶ್ವರಪ್ಪ ರಾಜೀನಾಮೆಗೆ ನಿರ್ಧಾರ..?

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಗುತ್ತಿಗೆದಾರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಡ ಹೆಚ್ಚಾಗುತ್ತಿದೆ. ಇದೀಗ ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಈಶ್ವರಪ್ಪ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಭೇಟಿ ಮಾಡಿದ ಬಳಿಕ ಈಶ್ವರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಸಭೆ ಬಳಿಕವೇ ರಾಜೀನಾಮೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜೀನಾಮೆ ಬಗ್ಗೆ ಸಿಎಂ ಜತೆ ಈಶ್ವರಪ್ಪ ಚರ್ಚೆ ನಡೆಸಲಿದ್ದು, ಇಂದೇ ಭೇಟಿಯಾಗುವ ಸಾಧ್ಯತೆಯಿದೆ. ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ರಾಜೀನಾಮೆ ನೀಡಬೇಕೋ, ಬೇಡವೋ ಎಂಬ ಬಗ್ಗೆ ಸಭೆಯಲ್ಲಿ ತೀರ್ಮಾನವಾಗಲಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...