ಬೆಂಗಳೂರು: ಖಾತೆ ಹಂಚಿಕೆ ವಿಚಾರವಾಗಿ ತಿವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಎಂಟಿಬಿ ನಾಗರಾಜ್ ಸಿಎಂ ಭೇಟಿ ಬಳಿಕ ತಣ್ಣಗಾಗಿದ್ದು, ತಮಗೆ ನೀಡಿರುವ ಖಾತೆಯಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್, ವಸತಿ ಖಾತೆ ನೀಡಬೇಕು ಎಂಬುದು ನನ್ನ ಬೇಡಿಕೆ. ಅದು ಸಾಧ್ಯವಾಗದಿದ್ದರೆ ಜನಪರ ಕೆಲಸ ಮಾಡುವ ಬೇರೆ ಯಾವುದೇ ಖಾತೆ ನೀಡಲಿ. ಒಟ್ಟಾರೆ ಉತ್ತಮ ಖಾತೆ ನೀಡಬೇಕು ಎಂಬುದು ನನ್ನ ಬೇಡಿಕೆಯಾಗಿತ್ತು. ಇದೇ ವಿಚಾರವಾಗಿ ಸಿಎಂ ಭೇಟಿಯಾಗಿ ಚರ್ಚಿಸಿದ್ದೇನೆ. ಮುಂದಿನ ದಿನಗಳಲ್ಲಿ ವರಿಷ್ಠರ ಬಳಿ ಚರ್ಚಿಸಿ ತೀರ್ಮಾನಿಸುವುದಾಗಿ ಸಿಎಂ ಹೇಳಿದ್ದಾರೆ. ಈಗ ನನಗೆ ಯಾವುದೇ ಅಸಮಾಧಾನವಿಲ್ಲ. ಸಿಎಂ ಕೊಟ್ಟ ಭರವಸೆಯಿಂದ ಸಂತಸವಾಗಿದೆ. ಹಾಗಾಗಿ ಈಗಿರುವ ಖಾತೆಯಲ್ಲಿಯೇ ಮುಂದುವರೆಯುತ್ತೇನೆ ಎಂದರು.
ವಿಶ್ವ ದಾಖಲೆಗೆ ಪಾತ್ರವಾಗಲಿದೆ 2024 ರ ಪ್ಯಾರಿಸ್ ಒಲಿಂಪಿಕ್ಸ್….!
ನೀಡಿರುವ ಪೌರಾಡಳಿತ ಖಾತೆ ಬದಲಾವಣೆ ಮಾಡದಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ನಾನೆಲ್ಲಿಯೂ ಹೇಳಿಲ್ಲ. ಮೂರು ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದೆ ಅಷ್ಟೇ. ಈಗ ಇದೇ ಖಾತೆಯಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದರು.