ಬೆಂಗಳೂರು: ಕಾರ್ಯಕರ್ತನ ಕಗ್ಗೊಲೆ ನೋಡಿ ಮನಸ್ಸಿಗೆ ವೇದನೆಯಾಗುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಇಂತಹ ಘಟನೆ ಆಗ್ತಿರೋದಕ್ಕೆ ನಾಚಿಕೆಯಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಕಾರ್ಯಕರ್ತನ ಹತ್ಯೆ ನಡೆದಿರುವುದು ವೇದನೆ ತಂದಿದೆ. ಅಂದು ಮಂಗಳೂರಿನಲ್ಲಿ ಪೊಲೀಸರ ಮೇಲೆ ಆಕ್ರಮಣ ನಡೆಯಿತು. ಡಿ.ಜೆ.ಹಳ್ಳಿ ಕೆಜಿ ಹಳ್ಳಿಯಲ್ಲಿ ಗಲಭೆ ನಡೆಯಿತು. ರಾಜ್ಯದಲ್ಲಿ ಹಿಂದುಗಳ ಕಗ್ಗೊಲೆಯಾಗುತ್ತಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಈ ಘಟನೆಗಳೆಲ್ಲ ನಡೆಯುತ್ತಿರುವುದು ಬೇಸರ ತಂದಿದೆ. ಎಸ್ ಡಿ ಪಿ ಐ ಸಂಘಟನೆ ನಿಷೇಧ ಮಾಡಿದ್ದರೆ ಇಂತಹ ಘಟನೆ ನಡೆಯುತ್ತಿತ್ತೇ? ಎಂದು ಪ್ರಶ್ನಿಸಿದ್ದಾರೆ.
’ಕರ್ಮ ರಿಟರ್ನ್ಸ್’ ಎಂದರೆ ಇದೇ ಅಲ್ಲವೇ….? ಶ್ವಾನಕ್ಕೆ ಒದೆಯಲು ಹೋಗಿ ತಾನೇ ಬಿದ್ದ ವ್ಯಕ್ತಿ…!
ಡಿ.ಜೆ.ಹಳ್ಳಿ ಕೆ.ಜಿ.ಹಳ್ಳಿ ಗಲಾಟೆ ನಡೆದಿದ್ದು ಸಿಎಂ ಗೃಹಸಚಿವರಾಗಿದ್ದ ಅವಧಿಯಲ್ಲಿಯೇ. ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆಯಾಗುತ್ತಿದೆ ಸಿಎಂ ಮಾತು ನಿಲ್ಲಿಸಿ ಕೃತಿಯಲ್ಲಿ ಕಠಿಣತೆ ತೋರಬೇಕು. ಪ್ರತಿ ಹತ್ಯೆ ನಡೆದಾಗಲೂ ಎಸ್ ಡಿ ಪಿ ಐ ಸಂಘಟನೆ ನಿಷೇಧಕ್ಕೆ ಹೇಳಿದ್ದೆವು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಲಾದರೂ ಸಂಘಟನೆ ಬ್ಯಾನ್ ಮಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.