ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಮುರುಗೇಶ್ ನಿರಾಣಿ ಹಾಗೂ ಶಾಸಕ ಅರವಿಂದ್ ಬೆಲ್ಲದ್ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಸ್ವಪಕ್ಷೀಯ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ.
ನಿರಾಣಿ ಹಾಗೂ ಬೆಲ್ಲದ್ ಅವರನ್ನು ಸಿಎಂ ಸ್ಥಾನಕ್ಕೆ ಪರಿಗಣಿಸದಂತೆ ವರಿಷ್ಠರಿಗೆ ಪತ್ರ ಬರೆಯಲು ಕೆಲ ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ. ಪ್ರಮುಖವಾಗಿ ಲಿಂಗಾಯಿತ ಸಮುದಾಯದ ಶಾಸಕರಿಂದಲೇ ಇಬ್ಬರ ಆಯ್ಕೆಗೆ ವಿರೋಧ ವ್ಯಕ್ತವಾಗಿದೆ ಎನ್ನಲಾಗಿದೆ.
ಹಸುಗಳ ಮೈ ಸವರಿ ಮೇವು ತಿನ್ನಿಸಿದ ಹಂಗಾಮಿ ಸಿಎಂ ಯಡಿಯೂರಪ್ಪ
ಮಾಜಿ ಡಿಸಿಎಂ ಒಬ್ಬರು ಕೂಡ ಈ ಇಬ್ಬರು ನಾಯಕರ ಆಯ್ಕೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಶಾಸಕರ ವಲಯದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.