
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷವೊಡ್ಡಲಾಗಿದೆ. ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷವೊಡ್ಡಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ಆಮಿಷವೊಡ್ಡುವಂತಿಲ್ಲ. ಹೀಗಾಗಿ ಸಿದ್ದರಾಮಯ್ಯ ಆಯ್ಕೆ ಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.